Home News ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ

by admin
0 comments

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿರುವ ಘಟನೆ ನಡೆದಿದೆ.

ಗುಡ್ಡ ಕುಸಿತದಿಂದ ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಕೇವಲ ಕಿರಿದಾದ ಜಾಗದಲ್ಲಿ ವಾಹನಗಳು ಸಂಚರಿಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಈ ರಸ್ತೆ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.