9
ಸಕಲೇಶಪುರ: ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತದಿಂದ ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುಡ್ಡ ಕುಸಿದು ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.