8
ಉಪ್ಪಿನಂಗಡಿ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಲಾರಿ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.