ಕೋಲಾರ: ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರ ಕೊರ್ತಿ-ಕೋಲಾರ ಸೇತುವೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋಲಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ