Home News ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆಗೆ ಶರಣು

ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆಗೆ ಶರಣು

by admin
0 comments

ಚೆನ್ನೈ: ತಮಿಳುನಾಡಿನ ತಿರುಪ್ಪೂರಿನಲ್ಲಿ 800 ಗ್ರಾಂ ಚಿನ್ನ, 70 ಲಕ್ಷ ರೂ. ಮೌಲ್ಯದ ಕಾರು ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾಗದೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ರಿಧನ್ಯಾ(27) ಎಂದು ತಿಳಿದು ಬಂದಿದೆ.

ಎಪ್ರಿಲ್‌ನಲ್ಲಿ ಕವಿನ್ ಕುಮಾರ್(28) ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ 8೦೦ ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.

ಭಾನುವಾರದಂದು ರಿಧನ್ಯಾ ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದರು. ಬಳಿಕ ದಾರಿ ಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಈ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

banner

ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಿಧನ್ಯಾ ಸಾಯುವ ಮುನ್ನ ತಂದೆಗೆ ವಾಟ್ಸಪ್‌ನಲ್ಲಿ 7 ವಾಯ್ಸ್ ಮೆಸೇಜ್‌ಗಳನ್ನು ಕಳುಹಿಸಿದ್ದರು. ಅದರಲ್ಲಿ “ನನ್ನ ಈ ನಿರ್ಧಾರಕ್ಕಾಗಿ ಕ್ಷಮಿಸಿ, ಪ್ರತಿದಿನ ನನ್ನ ಪತಿ, ಅತ್ತೆ ಹಾಗೂ ಮಾವ ನೀಡುತ್ತಿರುವ ಕಿರುಕುಳ ತಾಳಲಾಗದೇ ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ಇದೆಲ್ಲದರ ಬಗ್ಗೆ ಯಾರಿಗಾದರೂ ಹೇಳೋಣ ಎಂದರೆ, ಜೀವನವೆಂದರೆ ಹೀಗೆ ಇರುತ್ತೆ, ನೀನೇ ಎಲ್ಲದಕ್ಕೂ ಹೊಂದಿಕೊಂಡು ಹೋಗಬೇಕು ಎಂದು ಹೇಳುತ್ತಾರೆ. ಆದರೆ ನನ್ನ ನೋವು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನಾನು ನಿಮಗೆ ಸುಳ್ಳು ಹೇಳುತ್ತಿದ್ದೇನೆ ಎನ್ನಿಸಬಹುದು, ಆದರೆ ಇದು ಸುಳ್ಳಲ್ಲ. ಎಲ್ಲರೂ ನಾಟಕವಾಡುತ್ತಿದ್ದಾರೆ, ಅದಕ್ಕಾಗಿ ನಾನು ಮೌನವಾಗಿದ್ದೇನೆ. ಇದೆಲ್ಲವನ್ನು ನೋಡುತ್ತಾ ನನಗೆ ಬದುಕಲು ಸಾಧ್ಯವಿಲ್ಲ ಅಪ್ಪ” ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

“ನರಕವನ್ನು ಬಿಟ್ಟು ನಿಮ್ಮ ಬಳಿ ಬರಬೇಕೆಂದರೆ, ಜೀವನಪೂರ್ತಿ ನಿಮಗೆ ಹೊರೆಯಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನ ಪತಿ ದೈಹಿಕವಾಗಿ ಕಿರುಕುಳ ನೀಡಿದರೆ, ಅತ್ತೆ, ಮಾವ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ನಾನು ಯಾವ ತಪ್ಪು ಮಾಡಿಲ್ಲ. ಈ ಜೀವನ ನನಗೆ ಬೇಡ ಅಪ್ಪ. ಇದೇ ರೀತಿ ಈ ನರಕದಲ್ಲಿ ನನಗೆ ಬದುಕಲು ಆಗುವುದಿಲ್ಲ. ಆದರೆ ನೀನು ಮತ್ತು ಅಮ್ಮ ನನ್ನ ಪ್ರಪಂಚ. ಕೊನೆಯ ಉಸಿರಿನವರೆಗೂ ನೀನೇ ನನ್ನ ಭರವಸೆಯಾಗಿದ್ದೆ, ನನ್ನಿಂದ ನಿನಗೆ ತುಂಬಾ ನೋವಾಗಿದೆ. ನೀನು ಅದನ್ನು ಹೇಳುವುದಿಲ್ಲ. ಆದರೆ ನನ್ನನ್ನು ಈ ಸ್ಥಿತಿಯಲ್ಲಿ ನಿನಗೆ ನೋಡಲು ಸಾಧ್ಯವಾಗುವುದಿಲ್ಲ. ನಿಮ್ಮ ನೋವು ನನಗೆ ಅರ್ಥವಾಗುತ್ತೆ. ಕ್ಷಮಿಸಿ ಅಪ್ಪಾ, ಎಲ್ಲವೂ ಮುಗಿದಿದೆ. ನಾನು ಹೋಗುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮತ್ತೊಂದು ಸಂದೇಶದಲ್ಲಿ “ಬೇರೊಬ್ಬನಿಗೆ ತನ್ನನ್ನು ಮದುವೆ ಮಾಡಿಕೊಡಲು ಅತ್ತೆಯ ಮನೆಯವರು ನಿರ್ಧರಿಸಿದ್ದಾರೆ. ಅವರು ಕೊಡುವ ಹಿಂಸೆ ತಡೆಯಲಾಗುತ್ತಿಲ್ಲ. ಯಾರ ಬಳಿ ಹೇಳಿಕೊಳ್ಳಬೇಕೆಂಬುದು ಗೊತ್ತಿಲ್ಲ” ಎಂದು ಸಂದೇಶ ಕಳುಹಿಸಿದ್ದಾರೆ.

ರಿಧನ್ಯಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಚಿಕ್ಕಬಳ್ಳಾಪುರ: ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿ ಕರ್ನಾಟಕದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 8ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರಾದ ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಎಂದು ಗುರುತಿಸಲಾಗಿದೆ.

ಮೃತರು ಮತ್ತು ಗಾಯಗೊಂಡವರನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯವರಾಗಿದ್ದು, ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ತೀವ್ರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕುರಬಲಕೋಟ ಪೊಲೀಸರು ತಿಳಿಸಿದ್ದಾರೆ.

ಪೊಲೀಸರೊಂದಿಗೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಎಲ್ಲಾ ಗಾಯಾಳುಗಳನ್ನು ಮದನಪಲ್ಲಿಯ ಸರ್ಕಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆರು ಮಂದಿ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಕರ್ತವ್ಯ ನಿರತ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಬೆಂಗಳೂರಿನ ಕಾರ್ಪೊರೇಟ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.