ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಕ್ಯಾಂಟರ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರು ಸಿದ್ದೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಎಂದು ತಿಳಿದು ಬಂದಿದೆ.
ಮೃತರೆಲ್ಲರೂ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ನವರು ಎಂದು ತಿಳಿದುಬಂದಿದೆ.
ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಭಾನುವಾರ ಅರವಿಂದ್ನನ್ನು ಶಾಲೆಯ ವಸತಿ ನಿಲಯಕ್ಕೆ ಬಿಟ್ಟು ಬರಲು ಸಿದ್ದೇಗೌಡ ಅವರು ಒಂದೇ ಕಾರಿನಲ್ಲಿ ಕುಟುಂಬ ಸಮೇತ ಬಂದಿದ್ದರು.