ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಾಣಿ-ಬೆಂಗಳೂರು ರಸ್ತೆಯ ಬೊಳ್ಳುಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಚಾಲಕ ಕಡೇಶಿವಾಲಯ ನಿವಾಸಿ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಪ್ಪು ಕಲ್ಲಿನ ಕೆತ್ತನೆ (ಶಿಲ್ಪಿ) ಯ ಕೆಲಸ ಮಾಡುತ್ತಿರುವ ರಂಜಿತ್ ಅವರು ಕಡೇಶಿವಾಲಯ ಮನೆಯಿಂದ ಶಂಭೂರು ಕಡೆಗೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಕಾರು ಹೆದ್ದಾರಿಯಲ್ಲಿ ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ರಂಜಿತ್ ನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.