ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಎಂದು ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಗಳಾದ ಇವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, 15 ದಿನದ ಹಿಂದೆಯಷ್ಟೇ ಮೃತ ರಂಜೀತಾಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಿತಾರ್ಥವಾಗಿತ್ತು. ಇದರಿಂದ ರಾಘವೇಂದ್ರ ಹಾಗೂ ರಂಜೀತಾ ಇಂದು ಆಟೋದಲ್ಲಿ ಒಟ್ಟಿಗೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮುನವಳ್ಳಿ ಪಟ್ಟಣದ ರಾಘವೇಂದ್ರ, ರಂಜೀತಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಮದುವೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದರು. ಆದರೆ, ಮನೆಯಲ್ಲಿ ರಂಜೀತಾ 15 ದಿನಗಳ ಹಿಂದೆ ಅಷ್ಟೇ ಬೇರೊಬ್ಬ ಹುಡುಗನ ಜೊತೆ ಮದುವೆ ನಿಶ್ಚಿತಾರ್ಥ ಮಾಡಿ ಮುಗಿಸಿದ್ದಾರೆ. ಇದರಿಂದ ಮನನೊಂದ ರಂಜೀತ, ಈ ವಿಚಾರವನ್ನು ಆಟೋ ಓಡಿಸಿಕೊಂಡಿದ್ದ ಪ್ರಿಯಕರ ರಾಘವೇಂದ್ರಗೆ ತಿಳಿಸಿದ್ದಾಳೆ.
ಇದರಿಂದ ಮನನೊಂದು ಇಬ್ಬರು ಒಟ್ಟಿಗೆ ಸಾಯಲು ತೀರ್ಮಾನಿಸಿ, ಇಂದು ಬೆಳಗ್ಗೆ ಇಬ್ಬರೂ ಆಟೋದಲ್ಲಿ ಚಿಕ್ಕನಂದಿ ಗ್ರಾಮದ ಹೊರ ವಲಯದ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಬಳಿಕ ಪ್ರಿಯಕರ ಓಡಿಸುತ್ತಿದ್ದ ಆಟೋದಲ್ಲೇ ಇಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋದ ಹಿಂದಿನ ಸೀಟಿನ ಮೇಲಿನ ಕಬ್ಬಿಣದ ರಾಡ್ ಗೆ ಹಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.