Home News ತಂದೆಯ ಎದುರೇ ಮಗಳ ಕತ್ತು ಸೀಳಿ ಹ*ತ್ಯೆ

ತಂದೆಯ ಎದುರೇ ಮಗಳ ಕತ್ತು ಸೀಳಿ ಹ*ತ್ಯೆ

by admin
0 comments

ಮೇಘಾಲಯ: ಮೇಘಾಲಯದ ಪಶ್ಚಿಮ ಖಾಸಿ ಹಿಲ್ಸ್​ನಲ್ಲಿ ತಂದೆಯ ಎದುರೇ ಮಗಳ ಕತ್ತು ಸೀಳಿ ಹ*ತ್ಯೆ ಮಾಡಿರುವ ಘಟನೆ ನಡೆದಿದೆ.

ಘಟನಾ ಸಂಬಂಧ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ತನ್ನ ತಂದೆಯೊಂದಿಗೆ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಮೈರಾಂಗ್​ ಪಿಂಡೆನ್​ಗುಮಿಯೊಂಗ್ ಗ್ರಾಮದ ಮಾರುಕಟ್ಟೆಗೆ ಹೋಗಿದ್ದಳು.

ಮೃತರನ್ನು ಮೌಖಾಪ್ ಗ್ರಾಮದ ನಿವಾಸಿ ಫಿರ್ನೈಲಿನ್ ಖಾರ್ಸಿನ್ಟೀವ್ ಎಂದು ಗುರುತಿಸಲಾಗಿದೆ.

ಆರೋಪಿಯೇ ಅವರ ಬಳಿಗೆ ಬಂದು ಯುವತಿಯೊಂದಿಗೆ ವಾಗ್ವಾದ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

banner

ಇದ್ದಕ್ಕಿದ್ದಂತೆ ಆ ವ್ಯಕ್ತಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಯುವತಿಯನ್ನು ತಕ್ಷಣ ಮೈರಾಂಗ್ ಸಿವಿಲ್ ಆಸ್ಪತ್ರೆಗೆ ದಾಖಲಿಸಯಿತು. ಆದರೆ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು. ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.