Home News ಪುತ್ತೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ; ಇಬ್ಬರು ಆರೋಪಿಗಳ ಬಂಧನ

by admin
0 comments

ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸಂಬಂಧ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ ಎಂದಜು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.