ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯಿಂದ ಸಿಸಿಟಿವಿ ಕ್ಯಾಮರಾ, ಹಾರ್ಡ್ ಡಿಸ್ಕ್ ಸೇರಿದಂತೆ ಸುಮಾರು 50 ಸಾವಿರ ರೂ . ಮೌಲ್ಯದ ಸಾಮಾಗ್ರಿಗಳನ್ನು ಕಳವುಗೈದ ಘಟನೆ ಮಂಜೇಶ್ವರದಲ್ಲಿ ಬೆಳಕಿಗೆ ಬಂದಿದೆ.
ಮಂಜೇಶ್ವರ ಠಾಣಾ ವ್ಯಾಪ್ತಿಯ ಮಚ್ಚಂಪಾಡಿಯ ಇಬ್ರಾಹಿಂ ಖಲೀಲ್ ರವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಎರಡನೇ ಅಂತಸ್ತಿನ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಪಾಟನ್ನು ಮುರಿದು, ವಸ್ತ್ರಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಮನೆಯ ಸಿಸಿಟಿವಿ ಕ್ಯಾಮರಾಗಳು, ಹಾರ್ಡ್ ಡಿಸ್ಕ್ ಮೊದಲಾದವುಗಳನ್ನು ಕಳವು ಗೈದಿರುವುದಾಗಿ ಮಂಜೇಶ್ವರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಇಬ್ರಾಹಿಂ ಖಲೀಲ್ ಸೋಮವಾರ ಗಲ್ಫ್ ನಿಂದ ಊರಿಗೆ ಹೊರಟಿದ್ದು, ಈ ನಡುವೆ ಮೊಬೈಲ್ ನಲ್ಲಿ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಗಮನಿಸಿದಾಗ ಸಂಪರ್ಕ ಕಡಿದಿತ್ತು. ಮಂಗಳವಾರ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.