5
ಮಂಗಳೂರು: ಮಂಗಳೂರಿನಲ್ಲಿ ಹಲವೆಡೆ ಭಾರೀ ಮಳೆಯಾಗಿದ್ದು, ನಗರದ ನವಭಾರತ್ ವೃತ್ತದ ಬಳಿ ಬೃಹತ್ ಮರವೊಂದು ಧರೆಗುರುಳಿರುವ ಘಟನೆ ನಡೆದಿದೆ.
ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.