ಮಂಗಳೂರು: ನಗರದ ವಳಚ್ಚಿಲ್ ಬಳಿಯ ರಾಷ್ಟ್ರೀಯ ಹೆದ್ದಾರಿ-73 ರಲ್ಲಿ ಚಲಿಸುವ ಕಾರಿನಿಂದ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಪೊಲೀಸರು ಪ್ರಕರಣ ಕೈಗೊಂಡು 6,500 ರೂ. ದಂಡ ವಿಧಿಸಿದ್ದಾರೆ.
ಕಾರು ಚಲಿಸುತ್ತಿರುವಾಗ ನಾಲ್ವರು ವಿದ್ಯಾರ್ಥಿಗಳು ಹೊರಗೆ ನೇತಾಡುತ್ತಾ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿದ್ದರು ಎಂದು ವರದಿಯಾಗಿದೆ.
ಸಾರ್ವಜನಿಕರು ಈ ಕೃತ್ಯದ ವೀಡಿಯೊ ಸೆರೆಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶೀಘ್ರವಾಗಿ ಕಾರ್ಯಪ್ರವೃತ್ತರಾದ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರು ಮತ್ತು ಅದರಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ, 6,500 ರೂ. ದಂಡವನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.