Home News ಡೆತ್ ನೋಟ್ ಬರೆದಿಟ್ಟು ಪಿಎಸ್ಐ ಆತ್ಮಹತ್ಯೆಗೆ ಶರಣು

ಡೆತ್ ನೋಟ್ ಬರೆದಿಟ್ಟು ಪಿಎಸ್ಐ ಆತ್ಮಹತ್ಯೆಗೆ ಶರಣು

by admin
0 comments

ತುಮಕೂರು: ತುಮಕೂರು ನಗರದಲ್ಲಿ ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರು ದಾವಣಗೆರೆ ನಗರದ ಬಡಾವಣೆಯ ಪಿಎಸ್ಐ ನಾಗರಾಜಪ್ಪ (45) ಎಂದು ತಿಳಿದು ಬಂದಿದೆ.

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದ ನಾಗರಾಜಪ್ಪ, ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

banner

ಬಳಿಕ ಘಟನಾ ಸ್ಥಳಕ್ಕೆ ತುಮಕೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹೋಗಿತ್ತು ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.