Home News ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ: ನಾಲ್ವರ ಬಂಧನ

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ: ನಾಲ್ವರ ಬಂಧನ

by admin
0 comments

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹಲ್ಲೆಗೊಳಗಾದ ಯುವಕ ಕುಶಾಲ್ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳು ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಎಂದು ತಿಳಿದು ಬಂದಿದೆ.

banner

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿಯಾಗಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ಸಂದರ್ಭ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್​ನ​ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವೀಡಿಯೊ ಮಾಡಿಕೊಂಡಿದ್ದಾರೆ. ವೀಡಿಯೊದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಕೇಸ್​ನಂತೆ ಇದೂ ಆಗುತ್ತೆ. ಎ1 ಹೇಮಂತ ಎ2 ನಾನು ಎಂದು ವೀಡಿಯೊ ಹೇಳಿದ್ದಾರೆ. ಬಳಿಕ, ವೀಡಿಯೊ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.