ತುಮಕೂರು: ತುಮಕೂರು ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ ಹಣಕಾಸು ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆಗೈದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ತುಮಕೂರು ನಗರದ ಕೋತಿತೋಪು ನಿವಾಸಿ ನಫೀಸ್ ಅಹಮ್ಮದ್ (33) ಎಂದು ತಿಳಿದು ಬಂದಿದೆ.
ಕೊಲೆಗೈದ ವ್ಯಕ್ತಿ ಫೈರೋಜ್ ಪಾಷಾ ಎಂದು ತಿಳಿದು ಬಂದಿದೆ.
ಕೊಲೆಯಾದ ನಫೀಸ್ ಅಹಮ್ಮದ್, ಟೈಲ್ಸ್ ಕೆಲಸ ಮಾಡುತ್ತಿದ್ದನು. ಆರೋಪಿ ಫೈರೋಜ್ ಪಾಷಾ, ಬೈಕ್ ಗ್ಯಾರೇಜ್ ಇಟ್ಟುಕೊಂಡಿದ್ದನು.
ಹಣದ ವಿಚಾರಕ್ಕೆ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನಾ ಸ್ಥಳಕ್ಕೆ ಎನ್ ಇಪಿಎಸ್ ಪೊಲೀಸ್ ಠಾಣೆಯ ಪೊಲೀಸರು ಹಾಗೂ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ಭೇಟಿ ಪರಿಶೀಲನೆ ನಡೆಸಿದರು.
ಈ ಕುರಿತು ಎನ್ ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಫೈರೋಜ್ ಪಾಷಾ ನನ್ನು ಪೊಲೀಸರು ಬಂಧಿಸಿದ್ದಾರೆ.