Home News ಪುತ್ತೂರು: ಅಪ್ರಾಪ್ತ ವಯಸ್ಕರಿಬ್ಬರನ್ನು ತಡೆದು ವೀಡಿಯೊ ಸೆರೆಹಿಡಿದು ವೈರಲ್; ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು: ಅಪ್ರಾಪ್ತ ವಯಸ್ಕರಿಬ್ಬರನ್ನು ತಡೆದು ವೀಡಿಯೊ ಸೆರೆಹಿಡಿದು ವೈರಲ್; ಇಬ್ಬರು ಪೊಲೀಸ್‌ ವಶಕ್ಕೆ

by admin
0 comments

ಪುತ್ತೂರು: ಬೀರಮಲೆ ಬೆಟ್ಟದಲ್ಲಿ ಅಪ್ರಾಪ್ತ ವಯಸ್ಕರಿಬ್ಬರನ್ನು ತಡೆದು ಅವರ ಫೋಟೋ, ವೀಡಿಯೊವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪದಲ್ಲಿ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರು ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43) ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ರಾಮಚಂದ್ರ (38) ಎಂದು ತಿಳಿದು ಬಂದಿದೆ.

ಪ್ರಕರಣದ ಸಂತ್ರಸ್ತ ಬಾಲಕನ ತಂದೆ ದೂರು ನೀಡಿದ್ದಾರೆ. ನನ್ನ ಪುತ್ರ ಆತನ ಪರಿಚಯದ ಬಾಲಕಿಯೊಂದಿಗೆ ಬೀರಮಲೆ ಬೆಟ್ಟದಲ್ಲಿ ಕುಳಿತುಕೊಂಡಿದ್ದಾಗ ಆರೋಪಿಗಳು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿದ್ದರು. ಅನ್ಯಧರ್ಮದವನೆಂದು ನಿಂದಿಸಿ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ಕರೆದು ಅವಮಾನಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್‌ಸ್ಟ್ರಾಗ್ರಾಮ್‌ನಲ್ಲಿ ಹರಿಯ ಬಿಟ್ಟಿದ್ದಾರೆ. ನನ್ನ ಪುತ್ರನನ್ನು ಅನ್ಯಧರ್ಮದವ ಎಂದು ಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.