26
ರಾಮನಗರ: ಹಳೇ ಬೆಂಗಳೂರು ಮೈಸೂರು ಹೆದ್ದಾರಿಯ ಆರ್ಚಕರಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸ್ಕೂಟರ್ ಸವಾರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಸವಾರ ಸ್ಕೂಟರನ್ನು ನಿಲ್ಲಿಸಿ ಕೆಳಗೆ ಇಳಿದಿದ್ದಾನೆ ಅಷ್ಟು ಹೊತ್ತಿಗೆ ಸ್ಕೂಟರ್ ಹೊತ್ತಿ ಉರಿಯಲಾರಂಭಿಸಿದೆ. ಕೂಡಲೇ ಅಲ್ಲಿನ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಿದ್ದಾರೆ.
ಘಟನೆಯಲ್ಲಿ ಸ್ಕೂಟರ್ ಸವಾರ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.