26
ಸುಬ್ರಹ್ಮಣ್ಯ: ಕಡಬ-ಸುಬ್ರಹ್ಮಣ್ಯ ಹೆದ್ದಾರಿಯ ಬಿಳಿನೆಲೆ ಕೈಕಂಬ ಸಮೀಪ ಓವರ್‌ಟೇಕ್ ಮಾಡಿ ಮುಂದೆ ಸಾಗಿದ
ಅಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಮಹಿಳೆ ಸುಮಿತ್ರಾ ಎಂದು ತಿಳಿದು ಬಂದಿದೆ.
ಸುಮಿತ್ರಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.