Home News ಶಾಲಾ ಮುಖ್ಯ ಶಿಕ್ಷಕ ಆತ್ಮಹತ್ಯೆಗೆ ಶರಣು

ಶಾಲಾ ಮುಖ್ಯ ಶಿಕ್ಷಕ ಆತ್ಮಹತ್ಯೆಗೆ ಶರಣು

by admin
0 comments

ಸಿದ್ದಾಪುರ: ಹಳ್ಳಿಹೊಳೆ ಗ್ರಾಮದ ಸುಳ್ಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸೋಮವಾರ ಬೆಳಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆಯ ಪಾರೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮುಖ್ಯ ಶಿಕ್ಷಕ ಕುಬೇರ ಧರ್ಮ ನಾಯಕ್ ಯಾನೇ ಕುಬೇರಪ್ಪ (49) ಎಂದು ತಿಳಿದು ಬಂದಿದೆ.

ಮೂಲತಃ ಚಿತ್ರದುರ್ಗದ ನಿವಾಸಿಯಾಗಿದ್ದ ಅವರು ಹೊಸಂಗಡಿ ಕೆಪಿಸಿ ಕಾಲನಿಯ ಸರ್ಕಾರಿ ಕ್ವಾರ್ಟಸ್‌ನಲ್ಲಿ ಪತ್ನಿ ಹಾಗೂ ಮೂವರು ಪುತ್ರಿಯರೊಂದಿಗೆ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮತ್ತು ಕುರಿ-ಮೇಕೆ ಫಾರಂ ಮಾಡಿಕೊಂಡಿದ್ದರು. ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಚಿಟ್ ಫಂಡ್‌ನಲ್ಲಿ ಸಾಲ ಮಾಡಿಕೊಂಡಿದ್ದು ಈ ಬಗ್ಗೆ ಸಾಲ ಪತ್ರವು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬಂದಿತ್ತು ಎಂದು ಹೇಳಲಾಗಿದೆ.

banner

ಘಟನಾ ಸ್ಥಳಕ್ಕೆ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಶೆಟ್ಟಿ, ಡಿವೈಎಸ್‌ಪಿ ಕುಲಕರ್ಣಿ, ಪೊಲೀಸ್‌ ವೃತ್ತ ನಿರೀಕ್ಷಕ ಜಯರಾಮ ಗೌಡ, ಪಿಎಸ್‌ಐ ನಾಸೀ‌ರ್ ಹುಸೇನ್ ಭೇಟಿ ನೀಡಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.