Home News ಸಾರ್ವಜನಿಕರಿಗೆ ಧಮ್ಕಿ: ನಕಲಿ ಪೊಲೀಸ್ ಅಧಿಕಾರಿಯ ಬಂಧನ

ಸಾರ್ವಜನಿಕರಿಗೆ ಧಮ್ಕಿ: ನಕಲಿ ಪೊಲೀಸ್ ಅಧಿಕಾರಿಯ ಬಂಧನ

by admin
0 comments

ಪೀಣ್ಯ: ಪೊಲೀಸ್ ಗುರುತಿನ ಚೀಟಿ ಹಿಡಿದು ಸಾರ್ವಜನಿಕರಿಗೆ ಧಮ್ಕಿ ಹಾಕಿಕೊಂಡು ಓಡಾಡುತ್ತಿದ್ದ ನಕಲಿ ಪೊಲೀಸ್ ಅಧಿಕಾರಿಯನ್ನು ಪೀಣ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕರಿಹೋಬ್ಬನಹಳ್ಳಿ ನಿವಾಸಿ ರವಿ (38) ಎಂದು ತಿಳಿದು ಬಂದಿದೆ.

ನಗರದ ಠಾಣೆಯೊಂದರ ಪೊಲೀಸ್‌ ಸಿಬ್ಬಂದಿ ಮಂಜುನಾಥ್ ತಮ್ಮ ಗುರುತಿನ ಚೀಟಿಯನ್ನು ಕಳೆದುಕೊಂಡಿದ್ದು, ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಶೇಷಾದ್ರಿಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ರವಿ, ರಸ್ತೆಯಲ್ಲಿ ಸಿಕ್ಕ ಪೊಲೀಸ್ ಗುರುತಿನ ಚೀಟಿಯಲ್ಲಿ, ತನ್ನ ಫೋಟೋ ಅಂಟಿಸಿಕೊಂಡು, ಪಿಎಸ್‌ಐ ಎಂದು ಟೋಲ್ ಪ್ಲಾಜಾ ಮತ್ತು ವಿಮಾನ ನಿಲ್ದಾಣಗಳಲ್ಲಿ ಪೊಲೀಸ್‌ ಎಂದು ಹೇಳಿಕೊಂಡು ಓಡಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ರವಿ ಟೋಲ್‌, ವಿಮಾನ ನಿಲ್ದಾಣ ಹಾಗೂ ಇತರೆಡೆ ನಾನು ಪೊಲೀಸ್ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿಕೊಂಡು ಧಮ್ಕಿ ಹಾಕುತ್ತಿದ್ದ.

banner

ಇತ್ತೀಚೆಗೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಇಮಿಗ್ರೇಷನ್ ಬಳಿ ಆರೋಪಿ ಗುರಿತಿನ ಚೀಟಿ ತೋರಿಸಿದ್ದ. ಅದನ್ನು ಸ್ಕ್ಯಾನ್ ಮಾಡಿದಾಗ ಇಮಿಗ್ರೇಷನ್ ಅಧಿಕಾರಿಗಳಿಗೆ ಆರೋಪಿ ರವಿ ಮೇಲೆ ಸಂಶಯ ಬಂದಿತ್ತು. ಎದುರುಗಡೆ ಇರುವ ವ್ಯಕ್ತಿನೇ ಬೇರೆ ಐಡಿ ನಂಬರೇ ಬೇರೆ ಎಂಬುದು ಗೊತ್ತಾಗಿದೆ. ಬಳಿಕ ಇಮಿಗ್ರೇಷನ್‌ ಅಧಿಕಾರಿಗಳು ರಾಜ್ಯ ಗುಪ್ತಚರ ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಪೀಣ್ಯ ಠಾಣೆ ಪೊಲೀಸರಿಗೆ ಗುಪ್ತಚರ ವಿಭಾಗದಿಂದ ಮಾಹಿತಿ ರವಾನೆಯಾಗಿದ್ದು, ಕೂಡಲೇ ವಿಮಾನ ನಿಲ್ದಾಣಕ್ಕೆ ತೆರಳಿದ ಪೊಲೀಸರು, ಆರೋಪಿಯ ಆಧಾರ್ ಕಾರ್ಡ್ ಪರಿಶೀಲಿಸಿ ಆತನ ಮನೆಗೆ ಬಂದು ಪರಿಶೀಲಿಸಿದಾಗ ನಕಲಿ ಎಂಬುದು ತಿಳಿದು ಬಂದಿದೆ.

ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.