24
ಅರಂತೋಡು: ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸುಳ್ಯದ ಕಾಂಗ್ರೆಸ್ ಮುಖಂಡ ಧನಂಜಯ ಅಡ್ಡಂಗಾಯರ ಕಾರು ಮತ್ತು ಟಾಟಾ ಏಸ್ ವಾಹನದ ನಡುವೆ ಸಂಪಾಜೆಯ ಗಾರೆಮುರಿಯಲ್ಲಿ ಪರಸ್ಪರ ಡಿಕ್ಕಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಧನಂಜಯ ಅಡ್ಡಂಗಾಯರು ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿದ್ದರು. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು ಯಾರಿಗೂ ಯಾವುದೇ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.