14
ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಶೇಣಿ ಬಲ್ಲಕಲ್ಲ ನಿವಾಸಿ ಚಿತ್ರಕಲಾ (37) ಮತ್ತು ಆಕೆಯ 3ವರ್ಷದ ಪುತ್ರಿ ಜುಲೈ 1ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪತಿ ಬಿ.ಗಂಗಾಧರ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.