ಮೈಸೂರು: ಮೈಸೂರು ತಾಲೂಕಿನ ದಾಸನಕೊಪ್ಪಲಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ.
ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಓಡನಾಡಿ ಸಂಸ್ಥೆ, ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಮೈಸೂರು ಜಿಲ್ಲೆಯ ಪೊಲೀಸರು ಕೂಡಲೇ ತಂಡದೊಂದಿಗೆ ದಾಸನಕೊಪ್ಪಲು ಗ್ರಾಮದ ಒಂದು ಮನೆ ಮೇಲೆ ದಾಳಿ ಮಾಡಿದ್ದು, ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಇನ್ನು 6 ಪುರುಷರು ಮತ್ತು ಇಬ್ಬರು ಯುವತಿಯರು ಸಿಕ್ಕಿಬಿದ್ದಿದ್ದಾರೆ. ಸಿಕ್ಕಿಬಿದ್ದ ಯುವತಿಯರನ್ನು ಪುನರ್ವಸತಿ ಕೇಂದ್ರಗಳಿಗೆ ಕಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ಇಬ್ಬರು ಹೆಣ್ಣು ಮಕ್ಕಳನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇನ್ನು ಆರೋಪಿಗಳು 30 ದಿನಗಳಿಗೆ ಒಮ್ಮೆ ಮನೆ ಬದಲಾಯಿಸಿ ವೇಶ್ಯಾವಾಟಿಗೆ ದಂಧೆ ನಡೆಸುತ್ತಿದ್ದರು. ಬೇರೆ ಬೇರೆ ಕಡೆಗಳಿಂದ ಯುವತಿಯರಿಗೆ ಹಣ ಕೊಟ್ಟು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.