ಬೆಳ್ತಂಗಡಿ: ಕಿಲ್ಲೂರು ಕೋಯನಗರದಲ್ಲಿ ಮೇಯಲು ಬಿಟ್ಟಿದ್ದ ದನ ಸಾವನ್ನಪ್ಪಿದ್ದು, ದುಷ್ಕರ್ಮಿಗಳು ವಿಷವಿಕ್ಕಿ ಕೊಂದ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ನಿವಾಸಿ ಇಸುಬು ಅವರು ತಮ್ಮ ದನವನ್ನು ಸೋಮವಾರ ಎಂದಿನಂತೆ ಮೇಯಲು ಬಿಟ್ಟಿದ್ದರು. ಸಂಜೆಯ ವೇಳೆ ದನ ಸಾವನ್ನಪ್ಪಿರುವುದು ಕಂಡು ಬಂದಿದೆ. ನೋಡಿದಾಗ ಇದು ವಿಷ ಪ್ರಾಶನದಿಂದ ಸಾವನ್ನಪ್ಪಿರುವಂತೆ ಕಂಡು ಬಂದಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.