20
ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಸುಮಾರು 50 ವರ್ಷದ ಮೃತ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥನೆಂದು ಹೇಳಲಾಗಿದೆ.
ಕಾಡಾನೆ ಮೊದಲು ಸೈಕಲ್ ನಲ್ಲಿ ಬರುತ್ತಿದ್ದ ಸ್ಥಳೀಯ ಗ್ರಾಮಸ್ಥ ಅಜಯ್ ಎಂಬವರ ಮೇಲೆ ದಾಳಿ ಮಾಡಲು ಮುಂದಾಗಿದೆ. ಅಜಯ್ ಅವರು ಸೈಕಲನ್ನು ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.