Home News ಸಿಎಂ, ಡಿಸಿಎಂ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ: ಮಹಿಳೆಯ ಬಂಧನ

ಸಿಎಂ, ಡಿಸಿಎಂ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ: ಮಹಿಳೆಯ ಬಂಧನ

by admin
0 comments

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪದ ಮೇರೆಗೆ ಮಹಿಳೆಯೋರ್ವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆ ಸವಿತಾ ಎಂದು ತಿಳಿದು ಬಂದಿದೆ.

ಆರೋಪಿ ಸವಿತಾ ಕಿಟ್ಟಿ ಪಾರ್ಟಿಯಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದಳು. ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿದ್ದಾಳೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಅವರಂತಹ ಹಲವು ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿಕೊಳ್ಳುತ್ತಿದ್ದಳು. ಬಳಿಕ ಅವರನ್ನು ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದಳು.

banner

ಈ ಹಿಂದೆ ಅಮೆರಿಕದಿಂದ ಕಡಿಮೆ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿದ್ದಳು. ಈ ಪ್ರಕರಣ ಸಂಬಂಧ ಬಂಧನವಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದಳು ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.