48
ಕಾಸರಗೋಡು: ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್ ಬಳಿ ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಗಂಭೀರ ಗಾಯಗೊಂಡವರು ಇರಿಯಣ್ಣಿಯ ರಂಜೀಶ್ (35) ಹಾಗೂ ಪ್ರಸಾದ್ (45) ಎಂದು ತಿಳಿದು ಬಂದಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರು ಸಂಚರಿಸುತ್ತಿದ್ದ ಬೈಕ್ ಎದುರಿನಿಂದ ಬರುತ್ತಿದ್ದ ಟ್ರೈಲರ್ ನಡಿಗೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ತಲುಪಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸ ಪಟ್ಟು ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.