44
ಉಪ್ಪಿನಂಗಡಿ: ಕಳೆದ ಜೂ. 7ರಂದು 34ನೇ ನೆಕ್ಕಿಲಾಡಿಯ ಬೊಳ್ಳಾರ್ ಎಂಬಲ್ಲಿ ರಾ. ಹೆ. 75ರಲ್ಲಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕ ನೌಷದ್ ಬೊಳ್ಳಾರ್ (34) ಎಂದು ತಿಳಿದು ಬಂದಿದೆ.
ಬಕ್ರಿದ್ ಹಬ್ಬದ ದಿನ ಅಗರಬತ್ತಿ ಖರೀದಿಸಲೆಂದು ಬೈಕ್‌ನಲ್ಲಿ ಅಂಗಡಿಗೆ ಹೋಗಿ ಹಿಂದಿರುಗುವ ಸಂದರ್ಭ ಇನ್ನೊಂದು ಬೈಕ್ ಡಿಕ್ಕಿಯಾಗಿ ನೌಷದ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.