44
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕ ದೊಡ್ಡಹುಂಡಿ ಗ್ರಾಮದ ದಿ. ನಾಗರಾಜು ಹಾಗೂ ನಾಗರತ್ನ ಪುತ್ರ ಮನೋಜ್ ಕುಮಾರ್ (10) ಎಂದು ತಿಳಿದು ಬಂದಿದೆ.
ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಬಾಲಕನನ್ನು, ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂದರ್ಭ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ.