26
ರಾಮನಗರ: ಜಿಲ್ಲೆಯ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಹಸುವನ್ನು ಮೇಯಿಸುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಮೃತ ಯುವಕ ಗಿರೀಶ್ (25) ಎಂದು ತಿಳಿದು ಬಂದಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕ ಗಿರೀಶ್, ಬುಧವಾರ ಮಧ್ಯಾಹ್ನ ಹಸು ಮೇಯಿಸುವಾಗ ಎದೆನೋವು ಕಾಣಿಸಿಕೊಂಡು ಜಮೀನಿನ ಬಳಿಯೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.
ಕೂಡಲೇ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವಕ ಹೃದಯಾಘಾತದಿಂದ ಮೃತಪಟ್ಟಿರುದಾಗಿ ವೈದ್ಯರು ತಿಳಿಸಿದ್ದಾರೆ.