47
ಮೂಲ್ಕಿ: ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ರವಿ ನಾಯಕ್ (35) ಎಂದು ತಿಳಿದು ಬಂದಿದೆ.
ತಲೆಮರೆಸಿಕೊಂಡಿದ್ದ ರವಿಯನ್ನು ಮೂಲ್ಕಿ ಪೊಲೀಸರು ಚಿಕ್ಕಮಗಳೂರಿನ ತರಿಕೆರೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನ ವಿರುದ್ಧ ಸಕಲೇಶಪುರ ಠಾಣೆಯಲ್ಲೂ ಬೇರೊಂದು ಪ್ರಕರಣ ದಾಖಲಾಗಿದೆ.