Home News ಉಳ್ಳಾಲ: ಕುಸಿದು ಬಿದ್ದು ನವ ವಿವಾಹಿತ ಮೃತ್ಯು

ಉಳ್ಳಾಲ: ಕುಸಿದು ಬಿದ್ದು ನವ ವಿವಾಹಿತ ಮೃತ್ಯು

by admin
0 comments

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ.

ನಗರದಲ್ಲಿ ಟೈಲ‌ರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.