ಕಲಬುರಗಿ: ಸೇಡಂ ತಾಲೂಕಿನ ಮುಧೋಳದಲ್ಲಿ ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಎಂದು ತಿಳಿದು ಬಂದಿದೆ.
ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಹೇಳಿದ್ದನು. ಈ ವೇಳೆ ಪೋಷಕರು ನಾರಾಯಣ ರಾಥೋಡ್ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲು ಮಾಡಿದ್ದರು. ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿ ನಾರಾಯಣ ತಾಯಿಯನ್ನು ಬಿಟ್ಟಿರಲಾರದೆ ಆತ್ನಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ನಾರಾಯಣ 15 ದಿನಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದನು ಎಂದು ತಿಳಿದು ಬಂದಿದೆ.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.