55
ಬೆಳ್ತಂಗಡಿ: ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ನಡೆದಿದೆ.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.