Home News ನಡು ರಸ್ತೆಯಲ್ಲೇ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ನಡು ರಸ್ತೆಯಲ್ಲೇ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

by admin
0 comments

ಮೈಸೂರು: ಅಗ್ರಹಾರ ರಸ್ತೆಯಲ್ಲಿ ನಡು ರಸ್ತೆಯಲ್ಲೇ ಚಲಿಸುತ್ತಿದ್ದ ಆಟೋವನ್ನು ಅಡ್ಡಹಾಕಿದ ಗುಂಪೊಂದು ಮಚ್ಚಿನಿಂದ ಏಕಾಏಕಿ ದಾಳಿ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಅಗ್ರಹಾರ ರಸ್ತೆಯ ಜನದಟ್ಟಣೆ ಇರುವ ರಾಮಾನುಜಾ ರಸ್ತೆಯಲ್ಲಿ ಆಟೋ ಒಂದು ಹೋಗುತ್ತಿದ್ದು. ಆಟೋವನ್ನೇ ಹಿಂಬಾಲಿಸಿಕೊಂಡು ಬಂದ ಕಾರು ಏಕಾಏಕಿ ಆಟೋವನ್ನು ಅಡ್ಡಹಾಕಿದೆ. ಅಷ್ಟರಲ್ಲಾಗಲೇ ಮಚ್ಚು ಸಮೇತ ಕಾರಿನಿಂದ ಇಳಿದು ಬಂದು, ಆಟೋದೊಳಗಿದ್ದವರ ಮೇಲೆ ಮನಬಂದಂತೆ ಮಚ್ಚು ಬೀಸಿದ್ದಾರೆ.

ಆಟೋದೊಳಗಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ನಂತರ ಅದೇ ಕಾರಿನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಯುವಕನಿಗೆ ಗಂಭೀರ ಗಾಯಗಳಾಗಿವೆ.

banner

ಘಟನೆಯ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮರಾ ಹಾಗೂ ಸ್ಥಳೀಯರ ಮೊಬೈಲ್​​​ನಲ್ಲಿ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.

ಪೊಕ್ಸೊ ಪ್ರಕರಣವೊಂದರ ರಾಜಿ ಸಂಧಾನ ವಿಫಲವಾದ ಕಾರಣ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಪ್ರಕರಣದ ಸಂತ್ರಸ್ತೆ ಕುಟುಂಬಸ್ಥರು ಆರೋಪಿತರ ಕುಟುಂಬದವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಗೊಳಗಾದವರು ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುದು ತಿಳಿದುಬಂದಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles