Home News ಹಸುಗಳ ಕಳ್ಳತನ: ಇಬ್ಬರು ದನಗಳ್ಳರ ಬಂಧನ

ಹಸುಗಳ ಕಳ್ಳತನ: ಇಬ್ಬರು ದನಗಳ್ಳರ ಬಂಧನ

by admin
0 comments

ಚಿಕ್ಕಮಗಳೂರು: ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡಿ ಹೋಗುತ್ತಿದ್ದ ದನಗಳ್ಳರನ್ನು ಅಡ್ಡಗಟ್ಟಿದ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ದನಗಳ್ಳರನ್ನು ಬೆನ್ನಟ್ಟಿದ್ದ ಪೊಲೀಸರು ಕಾರನ್ನು ಅಡ್ಡಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ಪೊಲೀಸರ ಮೇಲೆಯೇ ದನಗಳ್ಳರು ರಾಡ್ ಬೀಸಿ, ತಪ್ಪಿಸಿಕೊಂಡು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಆರೋಪಿಗಳು ಪರಾರಿಯಾದರೂ ಬಿಡದ ಪೊಲೀಸರು ಮಧ್ಯರಾತ್ರಿವರೆಗೆ ಹುಡುಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

banner

ಬಂಧಿತ ಆರೋಪಿಗಳಿಂದ ಕಾರು, ರಾಡ್, 4 ಮೊಬೈಲ್ ಹಾಗೂ ಸಾಗಾಟ ಮಾಡುತ್ತಿದ್ದ 4 ಹಸುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.