59
ನವದೆಹಲಿ: ರಾಷ್ಟ್ರೀಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್(25)ರನ್ನು ಆಕೆಯ ತಂದೆಯೇ ಗುಂಡಿಟ್ಟು ಗುರುವಾರ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ
ತಂದೆ ದೀಪಕ್ ಯಾದವರನ್ನು ಗುರುಗ್ರಾಮ ಪೊಲೀಸರು ಬಂಧಿಸಿದ್ದಾರೆ.
ಕ್ರೀಡಾಪಟು ರಾಧಿಕಾ ಗುರುಗ್ರಾಮದಲ್ಲಿ ತಮ್ಮದೇ ಟೆನಿಸ್ ಅಕಾಡೆಮಿ ನಡೆಸುತ್ತಿದ್ದರು. ಇದನ್ನು ವಿರೋಧಿಸಿದ್ದ ದೀಪಕ್ ಮಗಳು ತನ್ನ ಮಾತು ಕೇಳದ್ದಕ್ಕೆ ಕೋಪಗೊಂಡು ಆಕೆಯನ್ನು ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದೆ.
ದೀಪಕ್ ಸೋದರ ಪೊಲೀಸರಿಗೆ ದೂರು ನೀಡಿದ್ದು, ದೀಪಕ್‌ರನ್ನು ಬಂಧಿಸಿರುವ ಪೊಲೀಸರು ಅವರು ಹತ್ಯೆಗೆ ಬಳಸಿದ್ದ ಪಿಸ್ತೂಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.