ಕಾಪು: ಕಾರು ಡಿಕ್ಕಿಯಾಗಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಕಟಪಾಡಿ ಮೂಡಬೆಟ್ಟುವಿನಲ್ಲಿ ಜು. 8ರಂದು ನಡೆದಿದೆ.
ಗಾಯಾಳು ಸ್ಕೂಟಿ ಸವಾರ ಮುಂಡೂರು ನಿವಾಸಿ ಸುವಿನ್ (21) ಎಂದು ತಿಳಿದು ಬಂದಿದೆ.
ಕಟಪಾಡಿಗೆ ಬಂದಿದ್ದ ಸುವಿನ್ ತನ್ನ ಸ್ನೇಹಿತ ಪವನ್ ಕುಮಾರ್ ಎಂಬಾತನ ಜೊತೆ ಮಾತುಕತೆ ನಡೆಸಿ ಬಳಿಕ ಸ್ಕೂಟಿಯಲ್ಲಿ ರಾ.ಹೆ. 66ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಮೂಡಬೆಟ್ಟು ಬಸ್ ನಿಲ್ದಾಣದ ಬಳಿಯಲ್ಲಿ ಸಂಚರಿಸುತ್ತಿದ್ದಾಗ ಎದುರಿನಿಂದ ಬಂದ ಕಾರು ಸ್ಕೂಟಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿರುವ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.