Home News ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

by admin
0 comments

ಬಂಟ್ವಾಳ: ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ ಅಲಿಯಾಸ್ ಅಬ್ದುಲ್ಲ ಎಂದು ತಿಳಿದು ಬಂದಿದೆ.

ಆರೋಪಿಯು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 2023ರ ಡಿಸೆಂಬರ್‌ನಿಂದ ತಲೆಮರೆಸಿಕೊಂಡಿದ್ದನು.

ಈ ಹಿನ್ನೆಲೆ ಆರೋಪಿಯ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಜು. 10ರಂದು ಪ್ರಕರಣ ದಾಖಲಿಸಲಾಗಿತ್ತು.

banner

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಗುರುವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.