ಕಾಪು: ಕಟಪಾಡಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಕಡಬ ನಿವಾಸಿ ಸತ್ಯನಾರಾಯಣ ಎಂದು ತಿಳಿದು ಬಂದಿದೆ.
ಗಾಯಾಳು ಕಡಬ ನಿವಾಸಿ ಸತ್ಯನಾರಾಯಣ ಅವರು ದೇಲಂಪಾಡಿ ನಿವಾಸಿ ಚಂದ್ರಶೇಖರ ಅವರ ಜೊತೆಗೆ ಕಳೆದ ಒಂದೂವರೆ ತಿಂಗಳಿನಿಂದ ಬಂಟಕಲ್‌ನಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ಬುಧವಾರ ರಾತ್ರಿ ಕೆಲಸ ಮುಗಿಸಿ ಊರಿಗೆ ಹೋಗಲೆಂದು ಸತ್ಯನಾರಾಯಣ ಅವರು ಸ್ನೇಹಿತನ ಜೊತೆಗೆ ಕಟಪಾಡಿಯವರೆಗೆ ಸ್ಕೂಟಿಯಲ್ಲಿ ಬಂದು ಬಸ್‌ಗಾಗಿ ಕಾಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಾ.ಹೆ. 66ರ ಕಟಪಾಡಿ ಜಂಕ್ಷನ್ ಬಳಿ ಮಂಗಳೂರು-ಉಡುಪಿ ಏಕಮುಖ ಸಂಚಾರ ರಸ್ತೆ ಪಕ್ಕ ಬಸ್ಸಿಗಾಗಿ ಕಾಯುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬಂದ ಕಾರು ಡಿಕ್ಕಿಯಾಗಿ ಸತ್ಯ ನಾರಾಯಣ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಅಪಘಾತದಿಂದಾಗಿ ಗಾಯಾಳುವಿನ ತಲೆ ಮತ್ತು ಸೊಂಟದಲ್ಲಿ ತೀವ್ರ ರಕ್ತಗಾಯಗಳಾಗಿದ್ದು ಸ್ಥಳೀಯರು ಅವರನ್ನು ಉಪಚರಿಸಿ ಚಿಕಿತ್ಸೆಯ ಬಗ್ಗೆ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.