33
ಮಲ್ಪೆ: ಯುವಕನೋರ್ವ ಮನೆಯಲ್ಲಿ ಮಲಗಿದಲ್ಲಿಯೇ ಮೃತಪಟ್ಟಿರುವ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತ ಯುವಕ ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ನಿವಾಸಿ ಮಹೇಶ್ (34) ಎಂದು ತಿಳಿದು ಬಂದಿದೆ.
ವಿವಾಹಿತರಾಗಿದ್ದ ಅವರು ರಕ್ತದೊತ್ತಡ, ಮೂರ್ಛ ರೋಗ ಮತ್ತು ಸಕ್ಕರೆ ಕಾಯಿಲೆಗಳಿಂದ ಬಳಲುತ್ತಿದ್ದರು. ವಿಪರೀತ ಮದ್ಯಪಾನದ ಚಟವಿದ್ದುದರಿಂದ ಆರೋಗ್ಯ ಸರಿಯಿಲ್ಲದೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.