19
ಬೆಳ್ತಂಗಡಿ: ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ 1.70 ಲಕ್ಷ ರೂ. ಮೌಲ್ಯದ ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ ದಾಖಲಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ನಡೆಸಿ ಮರಳನ್ನು ಶೇಖರಿಸಿಟ್ಟ ಆರೋಪಿಯನ್ನು ಕಾಂತರಬೆಟ್ಟು ನಿವಾಸಿ ಸುಕೀತ್ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದು ತೋಟದ ನಡುವೆ ಯಾವುದೇ ಪರವಾನಿಗೆಯಿಲ್ಲದೆ ಶೇಖರಿಸಿಟ್ಟಿದ್ದ 150 ರಿಂದ 170 ಟನ್ ಮರಳನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಮಳೆಗಾಲಕ್ಕಿಂತ ಮೊದಲು ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಇಲ್ಲಿ ಶೇಖರಿಸಲಾಗಿತ್ತು ಎಂದು ತಿಳಿದು ಬಂದಿದೆ.