20
ಸುಳ್ಯ: ಅಸೌಖ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಸುಳ್ಯ ಜಯನಗರದ ಸುರೇಶ್ ಕಾಮತ್ ಅವರ ಪತ್ನಿ ಸುಭಾಷಿಣಿ (38) ಎಂದು ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ತವರು ಮನೆ ಮಂಡೆಕೋಲಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು ಜು. 9ರಂದು ಜ್ವರದ ತೀವ್ರತೆಯಿಂದ ನಿತ್ರಾಣಗೊಂಡಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಸುಳ್ಯ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.