20
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಗ್ರಾಮದ ಕಡೆಗೋಳಿಯಲ್ಲಿ ಕಾರೊಂದು ಹೆದ್ದಾರಿಯನ್ನು ದಾಟುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿ ಸ್ಕೂಟರ್ ಸವಾರೆ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರು ಅಮ್ಮುಂಜೆ ಮುಡಾಯಿಕೋಡಿ ಬೊಟ್ಟು ಮನೆ ನಿವಾಸಿ ಮಲ್ಲಿಕಾ ಎಂದು ತಿಳಿದು ಬಂದಿದೆ.
ಮಲ್ಲಿಕಾ ಅವರು ಸ್ಕೂಟರ್‌ನಲ್ಲಿ ಅಮ್ಮುಂಜೆ ಭಾಗದಿಂದ ಆಗಮಿಸಿ ಮಂಗಳೂರು ಕಡೆಗೆ ತೆರಳಲು ಕಡೆಗೋಳಿಯಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರು ಭಾಗದಿಂದ ಆಗಮಿಸಿದ ಕಾರು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುವನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾರು ಚಾಲಕನ ವಿರುದ್ಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.