ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕ ವಸ್ತುವನ್ನು ಪಡೆದು ಮಂಗಳೂರು ನಗರಕ್ಕೆ ಗಾಂಜಾ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಆಗಿರುವ ಬೀದರ್ ಮೂಲದ ವೈದ್ಯನನ್ನು ಮಂಗಳೂರು ನಗರ ಸೆನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೀದರ್ ಮಂಗಲಪೇಟ್ ಮೂಲದ ನಿವಾಸಿ, ಪ್ರಸ್ತುತ ಬೆಂಗಳೂರಿನ ಕೆಂಗೇರಿ ಕೋಡಿಪಾಳ್ಯದ ಡಾ. ಪ್ರಜ್ವಲ್ ಪೀಣ್ಯಾಸ್ ಎಂದು ತಿಳಿದು ಬಂದಿದೆ.
ಗುರುವಾರ ಈತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದ್ದ ಪ್ರಜ್ವಲ್ ನಗರದ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದ. ಆರೋಪಿಯ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟದ ಮೂರು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.