ಬಂಟ್ವಾಳ: ಬಿ.ಸಿ.ರೋಡು ಬಸ್ ನಿಲ್ದಾಣದ ಬಳಿ ಫ್ಲೈ ಓವರ್ ತಳಭಾಗದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದು, ಬಳಿಕ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯ ಹೆಸರು ವಸಂತಕುಮಾರ್ ಎಂದು ತಿಳಿದು ಬಂದಿದೆ. ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಜು. 5ರಂದು ಮಧ್ಯಾಹ್ನ ಫ್ಲೈಓವರ್ ತಳ ಭಾಗದಲ್ಲಿ ಬಿದ್ದಿದ್ದ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಜು. 9ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.