Home News ಸುಳ್ಯ: ಜ್ವರದ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ಆರೋಪ; ಡಿಎಚ್‌ಒಗೆ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ಆರೋಪ; ಡಿಎಚ್‌ಒಗೆ ದೂರು

by admin
0 comments

ಸುಳ್ಯ: ತೀವ್ರ ಜ್ವರದ ಹಿನ್ನೆಲೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಘಟನೆ ಬಗ್ಗೆ ಇಲಾಖೆಗೆ ದೂರು ನೀಡಲಾಗಿದೆ.

ಜ್ವರದಿಂದ ಬಳಲುತ್ತಿದ್ದ 13 ವರ್ಷದ ಬಾಲಕಿಯನ್ನು ಆಕೆಯ ಹೆತ್ತವರು ಚಿಕಿತ್ಸೆಗಾಗಿ ಜು. 1ರಂದು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಅಲ್ಲಿನ ಕರ್ತವ್ಯ ವೈದ್ಯಾಧಿಕಾರಿ ಬಾಲಕಿಯನ್ನು ತಪಾಸಣೆ ಮಾಡಿದ ಬಳಿಕ ಹೊರ ರೋಗಿಗಳ ದಾಖಲಾತಿಯಲ್ಲಿ ಯುಪಿಟಿ ಪಾಸಿಟಿವ್‌ (ಗರ್ಭಿಣಿ) ಎಂದು ಬರೆದಿದ್ದು, ಇನ್ನಷ್ಟು ತಪಾಸಣೆಗಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದರು. ಈ ವರದಿಯಿಂದ ಗಾಬರಿಗೊಂಡ ಹೆತ್ತವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಮಗಳು ಗರ್ಭಿಣಿಯಾಗಿಲ್ಲ ಎಂಬ ವರದಿ ಸಿಕ್ಕಿದೆ.

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗಲೂ ಗರ್ಭಧಾರಣೆಯ ಕುರಿತು ಯಾವುದೇ ದೃಢೀಕರಣ ನೀಡಿರಲಿಲ್ಲ ಎಂದು ತಿಳಿದು ಬಂದಿದೆ.

ಬಾಲಕಿ ಗರ್ಭಿಣಿ ಎಂಬ ವಿಚಾರವನ್ನು ವೈದ್ಯಾಧಿಕಾರಿಯು ಎಲ್ಲರಿಗೂ ಹೇಳಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಸುಳ್ಳು ಮಾಹಿತಿ ಸಾರ್ವ ಜನಿಕವಾಗಿ ಹರಡಿದ್ದರಿಂದ ನೋವು ಆಗಿದೆ ಮಾತ್ರವಲ್ಲದೇ ಮಗಳು ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾಳೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬಾಲಕಿಯ ಹೆತ್ತವರು ದಾಖಲೆಯೊಂದಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

banner

ಈ ಹಿನ್ನಲೆಯಲ್ಲಿ ಡಿಎಚ್‌ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ತನಿಖೆಗಾಗಿ ತಂಡವನ್ನು ರಚಿಸಿ ಕಳುಹಿಸಿದ್ದಾರೆ. ಈ ತಂಡ ಜು. 10ರಂದು ಆಗಮಿಸಿ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಬಗ್ಗೆ ಸಂತ್ರಸ್ತರು ದೂರು ನೀಡಿದ್ದಾರೆ. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ತನಿಖೆ ಅನಂತರ ತಪ್ಪುಕಂಡುಬಂದಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಚ್‌ಒ ಡಾ. ತಿಮ್ಮಯ್ಯ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.