ಬ್ರಹ್ಮಾವರ: ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್‌ನಲ್ಲಿರುವ ಪ್ರವಾಸಿ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಾಳಿ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಬ್ರಹ್ಮಾವರದ ಹಂದಾಡಿ ಗ್ರಾಮದ ನಿವಾಸಿ ಉಮೇಶ್ ಪೂಜಾರಿ (49) ಎಂದು ತಿಳಿದು ಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ್ ಮಲಬಾಗಿ ಅವರ ತಂಡ ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈತ ಯಾವುದೇ ಪರವಾನಗಿ ಇಲ್ಲದೆ KA-19-X-9055 ನೋಂದಣಿ ಸಂಖ್ಯೆಯ ಸ್ಕೂಟರ್‌ನಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ತನಿಖೆಯಿಂದ ಆತ ಬ್ರಹ್ಮಾವರದ ವೈನ್ ಅಂಗಡಿಯಿಂದ ಮದ್ಯವನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.