ಬೆಳ್ತಂಗಡಿ: ಶಿಕ್ಷಕಿಯೋರ್ವರು ಮನೆಯ ಕೊಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಶಿಕ್ಷಕಿ ತಾಲೂಕಿನ ಕೊಯ್ಯರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಎಂದು ತಿಳಿದು ಬಂದಿದೆ.
ಎರಡು ವರ್ಷದ ಹಿಂದೆ ಕೊಯ್ಯರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯ ಸಮಸ್ಯೆಗಳಿತ್ತು ಎನ್ನಲಾಗಿದೆ.
ರಮ್ಯ ಅವರು ತಾಯಿ ಮನೆಗೆ ಬಂದಿದ್ದು ಆರೋಗ್ಯ ಸಮಸ್ಯೆ ಕುರಿತು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಕಂದಾಯ ಇನ್ಸೆಕ್ಟರ್ ಪ್ರತೀಷ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.